HomeKarnatakaಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ

ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ

ಮಂಡ್ಯ:  ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಮತ್ತು ಬೇರೆಯವರಿಗೂ ಕೆಲವು ವ್ಯತ್ಯಾಸಗಳು ಇವೆ. ಹೀಗಾಗಿ ಚರ್ಚೆ ಆಗದ ವಿಚಾರವನ್ನು ಪ್ರಸ್ತಾಪಿಸುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಲತಾ ಅವರು ಕಾಂಗ್ರೆಸ್ ಸೇರ್ಪಡೆಗೆ ಡಿ.ಕೆ. ಶಿವಕುಮಾರ್ ವಿರೋಧದ ಬಗ್ಗೆ ನನಗೆ ಗೊತ್ತಿಲ್ಲ. ಗೆದ್ದ ನಂತರ ಸುಮಲತಾ ಅವರು ನನ್ನ ಬಳಿ ರಾಜಕಾರಣ ಚರ್ಚೆ ಮಾಡಿಲ್ಲ. ಆಗಾಗ ಆಕಸ್ಮಿಕವಾಗಿ ಭೇಟಿಯಾದ ಸಂದರ್ಭದಲ್ಲಿ ವಿಶ್ವಾಸದಲ್ಲಿ ಮಾತನಾಡಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.

ಕೆಲವು ಕಡೆ ಸ್ಪರ್ಧಿಸಿ ಎಂದು ಸಚಿವರಿಗೆ ಹೈಕಮಾಂಡ್ ಹೇಳಿದ್ದು ಸತ್ಯ. ಆದರೆ, ಮಂಡ್ಯ ಲೋಕಸಭೆ ಕ್ಷೇತ್ರದ ವಿಚಾರದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular