ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ, ಹೈಕಮಾಂಡ್ ನಾಯಕರ ಭೇಟಿ ಬೆನ್ನಲ್ಲೇ ಇದೀಗ ಸಚಿವರು, ಶಾಸಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ್ ದಿಢೀರ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಒಕ್ಕಲಿಗ ಸಮುದಾಯದ ನಾಯಕರಿಂದಲೇ ದೆಹಲಿ ಯಾತ್ರೆ ಆರಂಭವಾಗಿದೆ. ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಮತ್ತೊಂದು ತಂಡ ದೆಹಲಿಗೆ ಭೇಟಿ ನಡಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಒಕ್ಕಲಿಗ ಟ್ರಪ್ ಕಾರ್ಡ್ ಪ್ಲೇ ಮಾಡಲಿದ್ದಾರಾ ಎಂಬ ಕುತೂಹಲ ಮೂಡಿಸಿದೆ.
