HomeKarnatakaBIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ,...

BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ: ಕಾವೇರಿ ಅಚ್ಚುಕಟ್ಟೆ, ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು? ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡ್ತಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳ್ತಾರೆ? ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆ ಕೊಟ್ಟಿದ್ದಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಆದರೆ ಕುಮರಸ್ವಾಮಿಯವರ ಕೊಡುಗೆಯೇನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿಗೆ ಕೆಆರ್ ಎಸ್ ನಿಂದ ನೀರು ಹರಿಸುತ್ತಿರುವ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಿ ಮಾತನಾಡಲಿ. ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿರುವ ಎರಡೂ ಪಕ್ಷದ ನಾಯಕರು ಕಾವೇರಿ ವಿಚಾರವಾಗಿ ಪ್ರಧಾನಿ ಬಳಿ ಚರ್ಚಿಸಲಿ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular