HomeKarnatakaಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಗಳ ಕುರಿತು ಬಿಗ್ ಅಪ್‌ಡೇಟ್

ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಗಳ ಕುರಿತು ಬಿಗ್ ಅಪ್‌ಡೇಟ್

ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿಗಳ ಕುರಿತು ಬಿಗ್ ಅಪ್‌ಡೇಟ್‌ ಇದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಲು ಸಂಸದ ಸುನೀಲ್ ಬೋಸ್ ತಾಕೀತು ಮಾಡಿದ್ದಾರೆ.

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸಬೇಕು. ಅಪಘಾತಗಳಿಗೆ ಅವಕಾಶವಾಗದಂತೆ ಸಮರ್ಪಕವಾಗಿ ಎಲ್ಲ ಮುಂಜಾಗ್ರತಾ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಾಮಗಾರಿಗಳು ಕಳಪೆ ಎಂಬ ದೂರುಗಳು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಮಗಾರಿಗಳು ನಿರ್ವಹಣೆಯಾಗಬೇಕು. ರಸ್ತೆ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು.

ಈ ಹಿಂದಿನ ಸಭೆಯಲ್ಲೂ ಹೆದ್ದಾರಿ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೊಂಡು ವಿದ್ಯುತ್ ದೀಪ ಅಳವಡಿಕೆ, ಗುಂಡಿ ಮುಚ್ಚುವುದು, ಎಲ್ಲಿ ಅಪಘಾತಕ್ಕೆ ಸಂಭವಿಸುತ್ತಿದ್ದೆಯೋ ಅಂತಹ ಸ್ಥಳಗಳಲ್ಲಿ ತುರ್ತಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕೆಲಸ ಕೈಗೊಳ್ಳಲು ಸೂಚಿಸಲಾಗಿತ್ತು.

ನಾನೂ ಸಹ ಖುದ್ದಾಗಿ ಹಲವೆಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆದರೆ ಇನ್ನೂ ಸಹ ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾಮಗಾರಿ ನಿರ್ವಹಿಸಿಲ್ಲ. ಇನ್ನು ಮುಂದೆ ಇಂತಹ ಧೋರಣೆ ಸಹಿಸುವುದಿಲ್ಲ ಎಂದು ಸಂಸದರು ಎಚ್ಚರಿಕೆ ನೀಡಿದರು.

ಗುಂಡ್ಲುಪೇಟೆ-ನಂಜನಗೂಡು ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿವೆ. ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಸೈನ್ ಬೋರ್ಡ್ ಮತ್ತು ಮಿರರ್ ನಂತಹ ಸುಗಮ ಸಂಚಾರಕ್ಕೆ ಮಾರ್ಗದರ್ಶನ ಮಾಡುವ ಫಲಕಗಳನ್ನು ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, “ನಗರ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿವೆ. ಹೀಗಾಗಿ ಬೈಪಾಸ್‍ಗಳನ್ನು ನಿರ್ಮಾಣ ಮಾಡುವಂತೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತಿಳಿಸಲಾಗಿತ್ತು. ಆದರೂ ಸಹ ಇನ್ನೂ ಕ್ರಮ ಕೈಗೊಂಡಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ತುರ್ತಾಗಿ ಕಾಮಗಾರಿ ಕೈಗೊಂಡು ಇನ್ನೂ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಬೇಕು” ಎಂದು ಹೇಳಿದರು.

ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, “ಬಹುತೇಕವಾಗಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗಿಲ್ಲ. ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಬೀದಿ ದೀಪಗಳು ಇಲ್ಲ. ಚರಂಡಿ ವ್ಯವಸ್ಥೆಯನ್ನು ಮಾಡಲಾಗಿಲ್ಲ. ಅಗರ ಮಾಂಬಳ್ಳಿ ಇನ್ನಿತರ ಕಡೆ ಗುಣಮಟ್ಟದ ಕಾಮಗಾರಿ ಆಗಿಲ್ಲ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

“ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿ ಸಂಬಂಧ ಅಧಿಕಾರಿಗಳಿಂದ ವಿವರ ಪಡೆದ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಸಂಬಂಧ ವರದಿ ನೀಡಬೇಕು. ಅರಣ್ಯ ವಾಸಿಗಳಿಗೆ ಮನೆಗಳನ್ನು ಒದಗಿಸುವ ಪ್ರಕ್ರಿಯೆ ಜರೂರಾಗಿ ನಡೆಯಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಿಗು ಅಗತ್ಯಕ್ಕನುಗುಣವಾಗಿ ಸಮಾನವಾಗಿ ಮನೆಗಳ ಹಂಚಿಕೆಯಾಗಬೇಕು” ಎಂದು ತಿಳಿಸಿದರು.

ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಸ್ವತ್ತು ನೀಡಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಅಧಿಕಾರಿಗಳು ನಿಗದಿತ ಅವಧಿಯೊಳಗೆ ಇ-ಸ್ವತ್ತು ನೀಡಬೇಕು. ಜನರನ್ನು ಅಲೆದಾಡಿಸದೇ ಕಾಲಮಿತಿಯಲ್ಲಿ ಸೌಲಭ್ಯಗಳನ್ನು ತಲುಪಿಸಬೇಕು. ಕಸ ವಿಲೇವಾರಿ ಸಮರ್ಪಕವಾಗಿ ಆಗಬೇಕು. ಪ್ರಸ್ತುತ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸುನೀಲ್ ಬೋಸ್ ಸೂಚನೆ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular