ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ರೈತ ಬಲಿಯಾಗಿದ್ದಾರೆ. 60 ವರ್ಷದ ಬಸವಣ್ಣ ಮೃತಪಟ್ಟವರು ಎಂದು ಹೇಳಲಾಗಿದೆ. ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಜಮೀನಿನಲ್ಲಿ ರೈತ ಬಸವಣ್ಣ ಹುಲ್ಲು ಕೊಯ್ಯುವಾಗ ಏಕಾಏಕಿ ಹುಲಿ ದಾಳಿ ನಡೆಸಿದೆ. ರೈತ ಬಸವಣ್ಣನವರ ದೇಹದ ಕಾಲು ಭಾಗವನ್ನು ಹುಲಿ ತಿಂದು ಹಾಕಿದೆ. ಕತ್ತಲಾದರೂ ರೈತ ಬಸವಣ್ಣ ವಾಪಸ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಬಸವಣ್ಣನವರ ಕುಟುಂಬದವರು ಹುಡುಕುತ್ತಾ ಜಮೀನಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಹುಲಿ ದಾಳಿಯಿಂದ ಬಡಗಲಪುರ ಸುತ್ತಲಿನ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಜನರನ್ನು ನೋಡಿ ಗಾಬರಿಯಿಂದ ಕಬ್ಬಿನ ಗದ್ದೆಗೆ ಹುಲಿ ನುಗ್ಗಿದೆ. ಮೃತದೇಹಕ್ಕೆ ರಕ್ಷಣೆ ನೀಡುತ್ತಾ ಜಮೀನಿನಲ್ಲಿಯೇ ಕುಟುಂಬದವರು ಬೀಡುಬಿಟ್ಟಿದ್ದಾರೆ. ಮೃತನ ಕುಟುಂಬದವರ ಮೇಲೆಯೂ ಹುಲಿ ದಾಳಿ ಮಾಡುವ ಸಾಧ್ಯತೆ ಇದೆ. ಇನ್ನೂ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ. ಆತಂಕದಲ್ಲಿಯೇ ಮೃತನ ಕುಟುಂಬದವರು ಮತ್ತು ಗ್ರಾಮಸ್ಥರು ಕಾಲ ಕಳೆಯುತ್ತಿದ್ದಾರೆ.
ಕಾಡಾನೆ ದಾಳಿಯಿಂದ ರೈತ ಸಾವು
ಗುಂಡ್ಲುಪೇಟೆ ತಾಲೂಕಿನ ಕೋಟಿಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ರೈತ ಜನ್ನಾನಾಯಕ(65) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಹಸುಗಳನ್ನು ಕಟ್ಟುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಬಂಡೀಪುರ ಹುಲಿ ರಕ್ಷಿತಾರಣ್ಯದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅಹಿಂದ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ಎನ್. ವಸಂತಕುಮಾರ್ ಅಧಿಕಾರ ಸ್ವೀಕಾರ
ಶಿವಮೊಗ್ಗ: ರಾಷ್ಟ್ರೀಯ ಅಹಿಂದ ಸಂಘಟನೆಯ ಶಿವಮೊಗ್ಗ ಜಿಲ್ಲಾ ನೂತನ ಅಧ್ಯಕ್ಷರಾಗಿ ಎನ್. ವಸಂತಕುಮಾರ್ ಅವರು ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಅಹಿಂದ ಸಂಘಟನೆಯ ಸಮಾವೇಶದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್. ಶಿವಳ್ಳಿ ಅವರಿಂದ ಎನ್. ವಸಂತಕುಮಾರ್ ಅವರು ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಅಹಿಂದ ಸಮುದಾಯಗಳ ಹಕ್ಕುಗಳು, ಸಾಮಾಜಿಕ ನ್ಯಾಯ ಹಾಗೂ ಶೋಷಿತ ಮತ್ತು ಹಿಂದುಳಿದ ವರ್ಗಗಳ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ರಾಜ್ಯ ಅಹಿಂದ ಸಂಘಟನೆಯ ಪ್ರಮುಖರು ಹಾಗೂ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್, ಅಹಿಂದ ಮುಖಂಡ ಮಂಜಪ್ಪ, ಎಸ್. ತಂಗರಾಜ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನೂತನ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎನ್. ವಸಂತಕುಮಾರ್ ಅವರಿಗೆ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್ ಗೆ ಸನ್ಮಾನ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ. ಯೋಗೇಶ್ ಅವರಿಗೆ ನಗರದ ಪುರಾತನ ಪ್ರಸಿದ್ಧ ಕೋಟೆ ಶ್ರೀ ಸೀತಾ ರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ದೇವೇಂದ್ರಪ್ಪ, ಸದಸ್ಯರಾದ ರೇಖಾ ರಂಗನಾಥ್, ಎಸ್.ಟಿ. ಚಂದ್ರಶೇಖರ್, ಆರ್. ರಾಜಶೇಖರ್, ಬಾಲಾಜಿ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು.

