HomeKarnatakaBREAKING NEWS: ಜಿಂಕೆ ಬೇಟೆಗೆ ಬಂದವರ ಮೇಲೆ ಫೈರಿಂಗ್, ಓರ್ವ ಸಾವು

BREAKING NEWS: ಜಿಂಕೆ ಬೇಟೆಗೆ ಬಂದವರ ಮೇಲೆ ಫೈರಿಂಗ್, ಓರ್ವ ಸಾವು

ಚಾಮರಾಜನಗರ: ಬೇಟೆಗಾರರ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು, ಒಬ್ಬ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ನಲ್ಲಿ ಘಟನೆ ನಡೆದಿದೆ.

ತಡರಾತ್ರಿ 10 ಬೇಟೆಗಾರರ ತಂಡ ಜಿಂಕೆ ಬೇಟೆಯಾಡಲು ಬಂದಿದ್ದು, 4ಕ್ಕೂ ಹೆಚ್ಚು ಕಡವೆ ಬೇಟೆಯಾಡಿ ಬೇಟೆಗಾರರು ಕೊಂಡೊಯ್ಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಅರಣ್ಯ ಅಧಿಕಾರಿಗಳ ಮೇಲೆ ಬೇಟೆಗಾರರು ದಾಳಿಗೆ ಯತ್ನಿಸಿದ್ದಾರೆ. ಆತ್ಮ ರಕ್ಷಣೆಗಾಗಿ ಬೇಟೆಗಾರರ ಮೇಲೆ ಅರಣ್ಯ ಅಧಿಕಾರಿಗಳು ಫೈರಿಂಗ್ ಮಾಡಿದ್ದು, 10 ಬೇಟೆಗಾರರ ಪೈಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular