HomeKarnatakaಅರಣ್ಯ ಸಂಚಾರ ದಳ ಪೊಲೀಸರ ದಾಳಿ: 16 ಕೆಜಿ ಅಂಬರ್ ಗ್ರೀಸ್ ವಶ; ನಾಲ್ವರು ಅರೆಸ್ಟ್

ಅರಣ್ಯ ಸಂಚಾರ ದಳ ಪೊಲೀಸರ ದಾಳಿ: 16 ಕೆಜಿ ಅಂಬರ್ ಗ್ರೀಸ್ ವಶ; ನಾಲ್ವರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಅರಣ್ಯ ಸಂಚಾರದಳ ಪೊಲೀಸರು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ದಾಳಿ ನಡೆಸಿ 16 ಕೆಜಿ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ಉಡುಪಿಯ ಇಮ್ತಿಯಾಜ್ ಆಬ್ದುಲ್ ರೆಹಮಾನ್(51), ದಕ್ಷಿಣ ಕನ್ನಡ ಜಿಲ್ಲೆ ತೊಕ್ಕೊಟ್ಟುವಿನ ಚಿತ್ರಾಂಜಲಿ ನಗರದ ಚೇತನ್ ಕುಮಾರ್(45), ಉಲ್ಲಾಳ ತಾಲೂಕಿನ ಮಂಜನಾಡಿ ಗ್ರಾಮದ ಶೇಷಪ್ಪ(49), ಸುರತ್ಕಲ್ ನ ವೆಂಕಟೇಶ್(49) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಕಾರ್ ನಲ್ಲಿ ಅಕ್ರಮವಾಗಿ ಅಂಬರ್ ಗ್ರೀಸ್ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಮಾಹಿತಿ ಆಧರಿಸಿ ಅರಣ್ಯ ಸಂಚಾರ ದಳ ಪೊಲೀಸರು ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪ ದಾಳಿ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಫೆಬ್ರವರಿ 21ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular