ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಶಾಗ್ಯ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೆಟಿಗೆ ಮೂವರು ಬೇಟೆಗಾರರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಜೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗುವುದು ಎಂದರು.
ಮ್ಯಾಜಿಸ್ಟ್ರೇಟ್ ತನಿಖೆ ನಡೆಸಿ ಸತ್ಯಾಸತ್ಯತೆ ಪತ್ತೆ ಮಾಡಲಾಗವುದು. ಪ್ರಕರಣದಲ್ಲಿ ಯಾರಿದು ತಪ್ಪು, ಯಾರಿದು ಸರಿ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗುವುದು ಎಂದು ಹೇಳಿದರು.
ಏನಿದು ಘಟನೆ?
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಮೂವರು ಬೇಟೆಗಾರರು ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಅರಣ್ಯ ಸಿಬ್ಬಂದಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ದಾಳಿಯಲ್ಲಿ ಮೂವರು ಕಾಡಿಗಳ್ಳರು ಬಲಿಯಾಗಿದ್ದಾರೆ.
ಮೃತರನ್ನು ಪೀಟರ್, ಕುಮಾರ್, ಅಂತೋಣಿಸ್ವಾಮಿ ಎಂದು ಗುರುತಿಸಲಾಗಿದೆ. ಗುಂಡಿನ ಚಕಮಕಿ ವೇಳೆ ಓರ್ವ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯಲ್ಲಿ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹ ವಶಪಡಿಸಿಕೊಳ್ಳಲಾಗಿದೆ.
ಮೂವರು ಬೇಟೆಗಾರರ ಸಾವಿನ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ಕುಟುಂಬದವರು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಟೆಗಾರರನ್ನು ಮೊದಲು ಸೆರೆಹಿಡಿದು ಬಳಿಕ ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಅರಣ್ಯ ಇಲಾಖೆ ನಿರಾಕರಿಸಿದ್ದು, ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲೇ ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ. ಬೇಟೆಗಾರರ ಸಾವು ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದೆ.
ಮೃತರ ಕುಟುಂಬದವರು ಹಾಗೂ ಸ್ಥಳೀಯರು ಶಾಗ್ಯದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಮೂವರು ಬೇಟೆಗಾರರು ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಅರಣ್ಯ ಸಿಬ್ಬಂದಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ದಾಳಿಯಲ್ಲಿ ಮೂವರು ಕಾಡಿಗಳ್ಳರು ಬಲಿಯಾಗಿದ್ದಾರೆ.
ಮೃತರನ್ನು ಪೀಟರ್, ಕುಮಾರ್, ಅಂತೋಣಿಸ್ವಾಮಿ ಎಂದು ಗುರುತಿಸಲಾಗಿದೆ. ಗುಂಡಿನ ಚಕಮಕಿ ವೇಳೆ ಓರ್ವ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯಲ್ಲಿ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹ ವಶಪಡಿಸಿಕೊಳ್ಳಲಾಗಿದೆ.
ಮೂವರು ಬೇಟೆಗಾರರ ಸಾವಿನ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ಕುಟುಂಬದವರು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಟೆಗಾರರನ್ನು ಮೊದಲು ಸೆರೆಹಿಡಿದು ಬಳಿಕ ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಅರಣ್ಯ ಇಲಾಖೆ ನಿರಾಕರಿಸಿದ್ದು, ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲೇ ಸಾವು ಸಂಭವಿಸಿದೆ ಎಂದು ಹೇಳಿದೆ.
ಮೃತರ ಕುಟುಂಬದವರು ಹಾಗೂ ಸ್ಥಳೀಯರು ಶಾಗ್ಯದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಬೈಕ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನ ಚೆಲ್ಲಾಪಿಲ್ಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ.ಘಟನೆಯಿಂದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

