HomeLatest NewsBREAKING: ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ರೈತರು ಸ್ಥಳದಲ್ಲೇ ದುರ್ಮರಣ

BREAKING: ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ರೈತರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸತ್ತೇಗಾಲದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮಾಯಪ್ಪ (51) ಹಾಗೂ ನಟರಾಜು (60) ಮೃತ ರೈತರು. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಪಾಸ್ ರಸ್ತೆಯ ಬಳಿ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಹಳ್ಳಕ್ಕೆ ಉರುಳಿ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಲ್ಲೇ ಬೈಕ್ ಸವಾರ ಮಾಯಪ್ಪ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಟರಾಜು ಅವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular