ಮಲೆಮಹದೇಶ್ವರ ಬೆಟ್ಟ, ಚಾಮರಾಜನಗರಕ್ಕೆ ಇಂದು ಸಿಎಂ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 26, 27ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಸೆ. 26ರಂದು ರಾತ್ರಿ 8.30 ಕ್ಕೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಸೆ. 27 ರಂದು ಬೆಳಿಗ್ಗೆ 9ಕ್ಕೆ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದ ರಂಗಮಂದಿರ ಆವರಣದಲ್ಲಿ ಆಯೋಜಿಸಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ನಾಗಮಲೆ ಭವನದಲ್ಲಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 2:30ಕ್ಕೆ ಚಾಮರಾಜನಗರದಲ್ಲಿ ಕನಕ ವಾಣಿಜ್ಯ ಸಂಕೀರ್ಣದ ಮೊದಲ ಹಂತದ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ, ನಂತರ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಸಿಎಂ ಬೆಂಗಳೂರಿಗೆ ತೆರಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read