ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದೆ. ಕಾಡಾನೆ ದಾಳಿಗೆ ಬೈಕ್ ಸವಾರರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.
ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ್ದಾರೆ. ಶಿವಮೂರ್ತಿ (51) ಮೃತ ದುರ್ದೈವಿ. ಜಲ್ಲಿಪಾಳ್ಯದಿಂದ ಮೂಕನಪಾಳ್ಯಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.
ಶ್ವಮೂರ್ತಿ, ಬಾಳೆ ಕಟಾವು ಮಾಡಲೆಂದು ಕೂಲಿ ಕೆಲಸಕ್ಕಾಗಿ ಜಲ್ಲಿಪಾಳ್ಯಕ್ಕೆ ಹೋಗಿದ್ದರು. ಕೆಲಸ ಮುಗಿಸಿ ವಾಪಾಸ್ ಆಗುವಾಗ ಆನೆ ದಾಳಿ ನಡೆಸಿದೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

