BREAKING NEWS: ಲೋಕಸಭಾ ಚುನಾವಣೆ: ರಾಜ್ಯದ ಒಂದು ಮತಗಟ್ಟೆಯಲ್ಲಿ ಮರುಮತದಾನ; ಏಪ್ರಿಲ್ 29ರಂದು ಚುನಾವಣೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಮರುಮತದಾನ ಘೋಷಿಸಲಾಗಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರುಮತದಾನ ನಡೆಯಲಿದೆ.

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚುನಾವಣೆ ನಡೆಯಲಿದೆ.

ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿ ಗಲಾಟೆ ನಡೆಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ದಾಳಿ ನಡೆಸಿ ಇವಿಎಂ, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನದ ದಿನದಂದು ಇಂಡಿಗನತ್ತ ಮತಗಟ್ಟೆಯಲ್ಲಿ ಮತದಾನ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಏಪ್ರಿಲ್ 29ರಂದು ಮರುಮತದಾನ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read