ಚಾಮರಾಜನಗರ: ಹುಲಿ ಸೆರೆ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಗಳನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳಿಂದ ಹುಲಿ ಗ್ರಾಮದಲ್ಲಿ ಸಂಚರಿಸಿ ಆತಂಕ ಸೃಷ್ಟಿಸುತ್ತಿದೆ. ಗ್ರಾಮಸ್ಥಲು ಹುಲಿ ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಬೋನು ಗಳನ್ನು ಅಳವಡಿಸಿದ್ದರು. ಆದರೆ ಹುಲಿ ಮಾತ್ರ ಬೋನಿಗೆ ಬಿದ್ದಿಲ್ಲ. ತಾಳ್ಮೆ ಕಳೆದುಕೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಪ್ರಶ್ನಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಹಿಡುಯವ್ ಪ್ರಯತ್ನದಲ್ಲಿದ್ದೇವೆ ಎಂದು ಕಥೆ ಹೇಳಿದ್ದಾರೆ.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂದು ಅರಣ್ಯ ಇಲಾಖೆ ಸಿಬ್ಬಂದಿ ಬಂದಾಗ ಅವರನ್ನು ಬೋನಿನಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಮೇಲಾಧಿಕಾರಿಗಳು ಸ್ಥಳಕ್ಕೆ ಬರುವರೆಗೂ ಬೋನಿನ ಬಾಗಿಲು ತೆರೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಗ್ರಾಮಸ್ಥರ ಆಕ್ರೋಶಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಪೇಚಿಗೆ ಸಿಲುಕಿರುವ ಘಟನೆ ನಡೆದಿದೆ.