HomeLatest NewsBIG NEWS: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ: ಗಾಯಾಳು ಸ್ಥಿತಿ ಗಂಭೀರ

BIG NEWS: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ: ಗಾಯಾಳು ಸ್ಥಿತಿ ಗಂಭೀರ

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ನಡೆದಿದೆ.

ಹಾಡಿ ನಿವಾಸಿ ರವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಬಹಿರ್ದೆಸೆಗೆ ಹೋಗಿದ್ದ ವೇಳೆ ಏಕಾಏಕಿ ಹುಲಿ ದಾಳಿ ನಡೆಸಿದೆ. ರವಿ ಅವರ ತಲೆ, ಕೈಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಲಿ ದಾಳಿಯಿಂದಾಗಿ ಹಾಡಿ ಜನರು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular