HomeLatest NewsBIG NEWS: ಹುಲಿ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿ ಬಲಿ

BIG NEWS: ಹುಲಿ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಚಾಮರಾಜನಗರ: ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.

ಸಣ್ಣಹೈದ ಹುಲಿ ದಾಳಿಗೆ ಮೃತಪಟ್ಟಿರುವ ಅರಣ್ಯ ಇಲಾಖೆ ವಾಚರ್. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಸಣ್ಣಹೈದ ಮೇಲೆ ಹುಲಿ ದಾಳಿ ನಡೆಸಿದೆ. ಸ್ಥಳದಲ್ಲೇ ವಾಚರ್ ಸಾವನ್ನಪ್ಪಿದ್ದಾರೆ.

ಕಳೆದ 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular