HomeKarnatakaBREAKING: ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

BREAKING: ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಚಾಮರಾಜನಗರದ ಕೊಳ್ಳೆಗಾಲದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್, ದಾಖಲೆಗಳು, ಲೆಕ್ಕಪತ್ರಗಳು ಸುಟ್ಟು ಕರಕಲಾಗಿವೆ. ಸಿಪಿಐ ಕಚೇರಿಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಬೆಂಕಿ ಹೊಇತ್ತಿಕೊಳ್ಳುತ್ತಿದ್ದಂತೆ ಕಚೇರಿಯಲ್ಲಿದ್ದ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಧರ್ಮೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಪಿಐ ಕಚೇರಿಯಲ್ಲಿ ಬೆಂಕಿ ಅವಘಡ ಆಕಸ್ಮಿಕವೋ ಅಥವಾ ಪೂರ್ವನಿಯೋಜಿತವೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು, ಅಗ್ನಿಶಾಮಕ ದಳ ಬೀಡುಬಿಟ್ಟಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular