HomeKarnatakaಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ: ಪ್ರವಾಸಿಗರು ಕಂಗಾಲು

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ: ಪ್ರವಾಸಿಗರು ಕಂಗಾಲು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್​​ ಜಲಾಶಯದಲ್ಲಿ ಹುಲಿಯ ಮೃತದೇಹ ಪತ್ತೆ ಆಗಿದೆ.

ಡ್ಯಾಂನಲ್ಲಿ ಹುಲಿಯ ಶವ ತೇಲುತ್ತಿರುವುದನ್ನು ಕಂಡು ಪ್ರವಾಸಿಗರು ಕಂಗಾಲಾಗಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಮತ್ತು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಭೇಟಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಲಾಶಯದಿಂದ ಹುಲಿಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದು, ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ಯಾಂಪಲ್ ಸಂಗ್ರಹಿಸಿ ಎಫ್​ಎಸ್​ಎಲ್​ಗೆ ರವಾನಿಸಿದ್ದಾರೆ.

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಚಿರತೆ ಉಪಟಳವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಇತ್ತೀಚೆಗೆ ಹನೂರು ಭಾಗದಲ್ಲಿ ಚಿರತೆ ದಾಳಿ ನಡೆಸಿ ಮೂರು ಕುರಿಯನ್ನ ತಿಂದು ತೇಗಿತ್ತು. ಕಳೆದ ಒಂದುವರೆ ತಿಂಗಳಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಬರೋಬ್ಬರಿ 15 ಕಡೆ ಚಿರತೆ ದಾಳಿ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular