ಚಾಮರಾಜನಗರ: ಮರಳು ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದಲ್ಲಿ ಮರಳು ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂರುವರೆ ವರ್ಷದ ಮೋಹಿನ್ ಝುಜಾನ್, ಮುನಿರಾ (45) ಹಾಗೂ ಕಾರು ಚಾಲಕ ಮುನೀರ್ ಮೃತ ದಿರ್ದೈವಿಗಳು. ಸಾನಿಯಾ ಮಿರ್ಜಾ, ಸಾಹಲ್ ಪರ್ವಿನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡ್ಲುಪೇಟೆಯಿಂದ ಮರಳು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹಾಗೂ ಕೇರಳಿಂದ ಗುಂಡ್ಲುಪೇಟೆ ಕಡೆಗೆ ಸಾಗುತ್ತಿದ್ದ ಕಾರಿನ ನಡಿವೆ ಈ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿರುವ ಕಾರು ಹಳ್ಳಕ್ಕೆ ಬಿದ್ದಿದೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

