HomeKarnatakaಉಡುತೊರೆ ಹಳ್ಳದಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಉಡುತೊರೆ ಹಳ್ಳದಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಚಾಮರಾಜನಗರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಣ ಬಿಸಿಲ ಝಳ ಹೆಚ್ಚುತ್ತಿದೆ. ಅಧಿಕ ತಾಪಮಾನ ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿಗಳಿಗೂ ಸಂಕಷ್ಟ ತಂದೊಡ್ದಿದೆ. ಬಾಯಾರಿಕೆಯಿಂದ ಬಳಲುತ್ತಿದ್ದ ಆನೆಯೊಂದು ಉಡುತೊರೆ ಹಳ್ಳಕ್ಕೆ ಬಂದು ಹಳ್ಳದಲ್ಲಿ ಸಿಲುಕಿ ಅಸ್ವಸ್ಥಗೊಂಡಿತ್ತು. ಆದರೆ ನೀರು ಅರಸಿ ಬಂದ ಕಾಡಾನೆ ಅಸ್ವಸ್ಥಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ನೀರು ಅರಸಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಡುತೊರೆ ಹಳ್ಳಕ್ಕೆ ಬಂದಿದ್ದ ಮೂರು ಕಾಡಾನೆಗಳು ಹಳ್ಳದ ಕೆಸರಿನಲ್ಲಿ ಸಿಲುಕಿಕೊಂಡಿದ್ದವು. ಇದರ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಒಂದು ಹೆಣ್ಣಾನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.

ಕಳೆದ ಎರಡು ದಿನಗಳ ಹಿಂದೆ, ಐದು ಆನೆಗಳ ಹಿಂಡು ನೀರು ಕುಡಿಯಲು ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಉಡುತೊರೆ ಹಳ್ಳದ ಹಿನ್ನೀರಿಗೆ ಬಂದಿದ್ದವು. ಈ ವೇಳೆ ಮೂರು ಆನೆಗಳು ಕೆಸರಿನಲ್ಲಿ ಹೂತು ಹೋಗಿದ್ದವು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಆನೆಗಳ ರಕ್ಷಣೆ ಮಾಡಿದ್ದಾರೆ. ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಸುಮಾರು 17 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಆನೆಗಳನ್ನು ರಕ್ಷಿಸಿದ್ದವು. ಈ ವೇಳೆ ಎರಡು ಆನೆಗಳು ಸುರಕ್ಷಿತವಾಗಿ ಕೆಸರಿನಿಂದ ಹೊರಬಂದು ಕಾಡಿನತ್ತ ಕಳುಹಿಸಲಾಗಿದೆ. ಆದರೆ, 25 ವರ್ಷದ ಹೆಣ್ಣಾನೆಯೊಂದು ತೀವ್ರ ಅಶಕ್ತತೆಯಿಂದಾಗಿ ಎದ್ದು ನಿಲ್ಲಲು ಸಾಧ್ಯವಾಗದೆ ಅಲ್ಲಿಯೇ ಉಳಿದುಕೊಂಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ವಸ್ಥಗೊಂಡಿದ್ದ ಆನೆಗೆ ನಾಗರಹೊಳೆ ಮತ್ತು ಮಲೆ ಮಹದೇಶ್ವರ ವನ್ಯಧಾಮದ ಪಶುವೈದ್ಯರು ಸ್ಥಳದಲ್ಲೇ ಗ್ಲೂಕೋಸ್ ಮತ್ತು ತುರ್ತು ಚಿಕಿತ್ಸೆ ನೀಡಿದ್ದರು. ಜೆಸಿಬಿ ಮತ್ತು ಕ್ರೇನ್‌ಗಳ ಸಹಾಯದಿಂದ ಆನೆಯನ್ನು ಎಬ್ಬಿಸುವ ಪ್ರಯತ್ನ ಮಾಡಿದರೂ ಚೇತರಿಸಿಕೊಂಡಿರಲಿಲ್ಲ. ನಿರ್ಜಲೀಕರಣ ಮತ್ತು ಬಿಸಿಲಿನ ತಾಪದಿಂದ ತೀವ್ರವಾಗಿ ಬಳಲಿದ್ದ ಆನೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular