ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಮಲೈ ಮಹದೇಶ್ವರ ಬೆಟ್ಟದಲ್ಲಿ ಎರಡು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ 4 ನೇ ತಿರುವಿನಲ್ಲಿ ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಮಲೆ ಮಹದೇಶ್ವರ ಬೆಟ್ಟದ ಕಡೆಯಿಂದ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ಮೈಸೂರಿನಿಂದ ಮಲೆ ,ಮಹದೇಶ್ವರ ಬೆಟ್ಟದತ್ತ ತೆರಳುತ್ತಿದ್ದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟದ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

