HomeLatest Newsಎದುರಾಳಿ ಅಭ್ಯರ್ಥಿಯನ್ನು ಜೆಡಿಎಸ್‌ ಬಿಡಿಸಿ ಕಾಂಗ್ರೆಸ್‌ಗೆ ಸೇರಿಸಿದ ಜಮೀರ್!

ಎದುರಾಳಿ ಅಭ್ಯರ್ಥಿಯನ್ನು ಜೆಡಿಎಸ್‌ ಬಿಡಿಸಿ ಕಾಂಗ್ರೆಸ್‌ಗೆ ಸೇರಿಸಿದ ಜಮೀರ್!

ಕಳೆದ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ನಾಯಕನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಕಾಂಗ್ರೆಸ್ ಸೇರ್ಪಡೆಯಾದರು.

ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜೆಡಿಎಸ್‌ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರಿಗೆ ಆತ್ಮೀಯವಾಗಿ ಸ್ವಾಗತಿಸಿ, ಪಕ್ಷದ ಸಂಘಟನೆಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಗಮನ ಸೆಳೆದಿದ್ದು ಸಿ.ಗೋವಿಂದರಾಜು. ಇವರು ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ನಾಯಕರು. ಆದರೆ ಇವರನ್ನು ಚಾಮರಾಜಪೇಟೆ ಶಾಸಕ, ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿ.ಗೋವಿಂದರಾಜು ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಜಮೀರ್ ಅಹಮದ್ ಖಾನ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಸಿ.ಗೋವಿಂದರಾಜು 2023ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ 19,086 ಮತಗಳನ್ನು ಪಡೆದು 3ನೇ ಸ್ಥಾನವನ್ನು ಪಡೆದಿದ್ದರು.

ಚಾಮರಾಜಪೇಟೆಯಲ್ಲಿ ಜಮೀರ್ ಅಹಮದ್ ಖಾನ್ 77,631 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿ, ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ 23,678 ಮತಗಳನ್ನು ಪಡೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಚಾಮರಾಜಪೇಟೆ ಕ್ಷೇತ್ರದ ಮೇಲೆ ಬಿಗಿ ಹಿಡಿತ, ಪ್ರಭಾವ ಹೊಂದಿರುವ ಜಮೀರ್ ಅಹಮದ್ ಖಾನ್ ಎದುರಾಳಿಯಾಗಿದ್ದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular