HomeKarnatakaಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಆ. 31ರವರೆಗೆ ಯೋಜನೆಯ ನೋಂದಣಿ ಹಾಗೂ ಮರುಪರಿಶೀಲನೆ

ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಆ. 31ರವರೆಗೆ ಯೋಜನೆಯ ನೋಂದಣಿ ಹಾಗೂ ಮರುಪರಿಶೀಲನೆ

ಹಾಸನ: ಹಾಸನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪವಿಭಾಗದಲ್ಲಿ ಇಂಧನ ಇಲಾಖೆಯ ಆದೇಶದಂತೆ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಹಾಗೂ ನೋಂದಣಿ ಕಾರ್ಯ ಆ.31 ರವರೆಗೆ ನಡೆಯುತ್ತಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕೆಐಎಡಿಬಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಮೀಟರ್ ರೀಡರ್ ಹಾಗು ಲೈನ್‌ಮನ್ ಸಿಬ್ಬಂದಿ ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದರೂ, ಇನ್ನೂ ಕೆಲವು ಗ್ರಾಹಕರ ನೋಂದಣಿ ಬಾಕಿ ಉಳಿದಿದೆ, ಆದ್ದರಿಂದ ಗೃಹಜ್ಯೋತಿ ಯೋಜನೆಗೆ ಇನ್ನೂ ನೋಂದಣಿ ಮಾಡಿಸದ ಗ್ರಾಹಕರು ಪ್ರತಿದಿನ ಬೆಳಗ್ಗೆ 9 ಗಂಟೆಯಿAದ ತಮ್ಮ ವ್ಯಾಪ್ತಿಯ ಶಾಖಾ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ನೋಂದಣಿಗೆ ವಿದ್ಯುತ್ ಬಿಲ್, ಆಧಾರ್ ಕಾರ್ಡ್ ಹಾಗೂ ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಒಂದು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ರೇಷನ್ ಕಾರ್ಡ್, ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಪಾನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಅರ್ಹ ಗ್ರಾಹಕರು ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ವಿಳಂಬ ಮಾಡದೇ ಶೀಘ್ರದಲ್ಲೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೋರಲಾಗಿದೆ, ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್ ಕೆ.ವಿ ಕೆಐಎಡಿಬಿ ಶಾಖೆ 9448994942, ಮಧು ಬಿ.ಆರ್ ಹೂವಿನಹಳ್ಳಿಕಾವಲು ಶಾಖೆ 9449598625, ಸತೀಶ್ ಆರ್ ಮೊಸಳೆಹೊಸಹಳ್ಳಿ ಶಾಖೆ 9448994943, ನಂದೀಶ್ ಗೊರೂರು ಶಾಖೆ 9448994949 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular