HomeLatest NewsBIG NEWS: ಇಂದು ಚಂದ್ರಗ್ರಹಣ ಹಿನ್ನೆಲೆ: ಚಾಮುಂಡಿಬೆಟ್ಟ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ

BIG NEWS: ಇಂದು ಚಂದ್ರಗ್ರಹಣ ಹಿನ್ನೆಲೆ: ಚಾಮುಂಡಿಬೆಟ್ಟ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ಮೈಸೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಾಡಿನ ಹಲವು ದೇವಾಲಗಳು ಬಂದ್ ಆಗಲಿವೆ. ಆದರೆ ನಾಡ ಅದಿದೇವತೆ ಚಾಮುಂಡಿ ಬೆಟ್ಟದಲ್ಲಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಮೈಸೂರಿನ ಚಾಮುಂಡಿ ಬೆಟ್ಟದ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ರಾತ್ರಿ 9ಗಂಟೆಗೆ ದೇವಾಲಯದ ಬಾಗಿಲು ಮುಚ್ಚಾಗುತ್ತದೆ. ಚಂದ್ರಗ್ರಹಣ ಕಾಲದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಗ್ರಹಣ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲದಲ್ಲಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು.

ಅಂಪಾಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ದೇವಾಲಯದಲ್ಲಿ ನೆರವೇರಲಿದೆ. ಗ್ರಹಣದ ಪೂಜೆ ವೇಳೆ ಯಾವುದೇ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. ಚಂದ್ರಗ್ರಹಣದ ನಂತರ ದೇವಸ್ಥಾನದ ಆಲಯ ಶುದ್ಧೀಕಾರ್ಯ ನಡೆಯಲಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಎಂದಿನಂತೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular