ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಪಲ್ಟಿಯಾಗಿರುವ ಘಟನೆ ನಡೆದಿದೆ.
ಮೈಸೂರು ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್, ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸಿದ್ಧಾರ್ಥ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.