HomeLatest NewsBIG NEWS: ಚಾಮುಂಡಿ ಬೆಟ್ಟದ ಶಿವಾರ್ಚಕ ವಿಧಿವಶ: ಇಂದು ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ!

BIG NEWS: ಚಾಮುಂಡಿ ಬೆಟ್ಟದ ಶಿವಾರ್ಚಕ ವಿಧಿವಶ: ಇಂದು ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ದಸರಾ ಸಂಭ್ರಮ-ಸಡಗರದ ನಡುವೆಯೇ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ವಿಧಿವಶರಾಗಿದ್ದಾರೆ.

ಶಿವಾರ್ಚಕ ವಿ.ರಾಜು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ.ರಾಜು ನಿಧನರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular