
ಜೂನ್ 23, 30, ಜುಲೈ 7, 10 ಹಾಗೂ 14ರಂದು ಚಾಮುಂಡಿ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿಸಲಾಗಿದ್ದು, ಜನರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

