HomeKarnatakaಮೈಸೂರು ವಿವಿ ಕುಲಪತಿ ನೇಮಕ ರದ್ದು: ಹೈಕೋರ್ಟ್ ಆದೇಶ

ಮೈಸೂರು ವಿವಿ ಕುಲಪತಿ ನೇಮಕ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು ನೇಮಕ ಮಾಡಿ 2023ರ ಮಾರ್ಚ್ 23 ರಂದು ರಾಜ್ಯಪಾಲರು ಹೊರಡಿಸಿದ ಆದೇಶ ರದ್ದು ಮಾಡುವಂತೆ ಕೋರಿ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ. ವೆಂಕಟೇಶ್ ಕುಮಾರ್ ಅವರು ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರಿದ್ದ ಹೈಕೋರ್ ಪೀಠ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ಮತ್ತು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗದ ನಿಯಮಗಳ ಅನುಸಾರ ಮೈಸೂರು ವಿವಿ ಕುಲಪತಿ ಹುದ್ದೆಗೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular