HomeLatest Newsಕೆನಡಾದಲ್ಲಿ ಹತ್ಯೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16ಕ್ಕೆ ಬೆಂಗಳೂರಿಗೆ

ಕೆನಡಾದಲ್ಲಿ ಹತ್ಯೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16ಕ್ಕೆ ಬೆಂಗಳೂರಿಗೆ

ಕೆನಡಾದ ಟೊರಾಂಟೋ ನಗರದಲ್ಲಿ ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಪಾರ್ಥೀವ ಶರೀರವನ್ನು ತರಲು ಸಹಕಾರ ನೀಡಬೇಕು ಎಂದು ಕುಟುಂಬದವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.

ಕರ್ನಾಟಕ ಸರ್ಕಾರ, ಚಿಕ್ಕಬಳ್ಳಾಪುರ ಸಂಸದ ಡಾ.ಸುಧಾಕರ್ ಕೆ. ಈ ಕುರಿತು ಕೇಂದ್ರ ವಿದೇಶಾಂಗ ಇಲಾಖೆ ಜೊತೆ ಮಾತುಕತೆ ನಡೆಸಿದ್ದರು. ಪಾರ್ಥೀವ ಶರೀತ ಭಾರತಕ್ಕೆ ತರಲು ಪ್ರಯತ್ನಗಳನ್ನು ಮಾಡಲಾಗಿತ್ತು.

ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16ಕ್ಕೆ ಬೆಂಗಳೂರಿಗೆ ಬರಲಿದೆ. ಈ ಕುರಿತು ಸಂಸದ ಡಾ.ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ನೀಡಿದ್ದಾರೆ. ‘ಕನ್ನಡದ ಹೆಮ್ಮೆಯ ಪುತ್ರ ಚಂದನ್ ಕುಮಾರ್ ಅವರ ಪಾರ್ಥಿವ ಶರೀರ ಫೆಬ್ರವರಿ 16ರಂದು ತಾಯ್ನಾಡಿಗೆ ಮರಳಲಿದೆ’ ಎಂದು  ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆನಡಾ ದೇಶದ ಟೊರಾಂಟೋ ನಗರದಲ್ಲಿ ಕಳೆದ ಶನಿವಾರ, ಫೆಬ್ರವರಿ 7ರಂದು ನಡೆದ ಶೂಟೌಟ್ ನಲ್ಲಿ ಹತ್ಯೆಗೀಡಾಗಿದ್ದ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಅವರ ಪಾರ್ಥಿವ ಶರೀರವನ್ನ ತಾಯ್ನಾಡಿಗೆ ತರಲು ನಡೆಯುತ್ತಿದ್ದ ಪ್ರಯತ್ನ ಫಲಕಾರಿಯಾಗಿರುವುದು ಸಮಾಧಾನ ತಂದಿದೆ.

ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ ಈಗಷ್ಟೇ ನನಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದು, ಚಂದನ್ ಕುಮಾರ್ ಅವರ ಪಾರ್ಥಿವ ಶರೀರ ನಾಳೆ ಶನಿವಾರ ಫೆಬ್ರವರಿ 14ರಂದು ಕೆನಡಾ ಟೊರಾಂಟೋ ನಗರದಿಂದ ಹೊರಟು, ನವದೆಹಲಿಯ ಮೂಲಕ ಸೋಮವಾರ, ಫೆಬವರಿ 16ರಂದು ಬೆಳಿಗ್ಗೆ ಸುಮಾರು 8:30ರ ಸಮಯಕ್ಕೆ ಬೆಂಗಳೂರು ತಲುಪಲಿದೆ.

ನೂರ್ಕಾಲ ಬಾಳಿ ಬದುಕಬೇಕಾದ ಮಗನನ್ನ ಕಳೆದುಕೊಂಡ ಹೆತ್ತವರಿಗೆ ಮಗನ ಜೀವವನ್ನ ವಾಪಸ್ಸು ತಂದುಕೊಡುವ ಶಕ್ತಿ ನಮಗಿಲ್ಲ. ಆದರೆ ಮಗನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ತಮ್ಮ ಸಂಪ್ರದಾಯದಂತೆ ತಾಯ್ನಾಡಿನಲ್ಲಿ ಅಂತಿಮ ಸಂಸ್ಕಾರ ಮಾಡುವ ಅವಕಾಶವನ್ನಾದರೂ ಅವರಿಗೆ ಒದಗಿಸುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೆ.

ಚಂದನ್ ಕುಮಾರ್ ಅವರ ಪಾರ್ಥಿವ ಶರೀರವನ್ನ ತಾಯ್ನಾಡಿಗೆ ತರಲು ಸಹಕಾರ ಕೊಟ್ಟ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ವಿದೇಶಾಂಗ ಸಚಿವರಾದ ಶ್ರೀ ಜೈಶಂಕರ್ ಅವರಿಗೆ, ವಿದೇಶಾಂಗ ಸಚಿವಾಲಯ ಮತ್ತು ಕೆನಡಾದ ಭಾರತೀಯ ಎಂಬೆಸಿಯ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಚಂದನ್ ಕುಮಾರ್ ಅವರ ಪೋಷಕರು, ಕುಟುಂಬ ಸದಸ್ಯರು ಹಾಗೂ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular