HomeEntertainmentBIG NEWS: ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಪಡೆಯಲು ಮುಂದಾದ ಜೋಡಿ

BIG NEWS: ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ಪಡೆಯಲು ಮುಂದಾದ ಜೋಡಿ

ಬೆಂಗಳೂರು: ಚಂದನವನದ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತ ಗೌಡ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಇಬ್ಬರೂ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕನ್ನಡ ಬಿಗ್ ಬಾಸ್ ನಿಂದ ಆರಂಭವಾಗಿದ್ದ ಈ ಜೋಡಿಯ ಪ್ರೀತಿ ಬಳಿಕ ಮೈಸೂರು ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಪ್ರಪೋಸ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಇಬ್ಬರ ಮದುವೆಗೆ ಎರಡೂ ಕುಟುಂಬದವರು ಒಪ್ಪಿದ್ದರು.

ವಿವಾಹದ ಬಳಿಕ ತಮ್ಮದೇ ಶೈಲಿಯ ರ್ಯಾಪ್ ಸಾಂಗ್ ಮೂಲಕ ಇನ್ನಷ್ಟು ಜನಪ್ರಿಯತೆ ಪಡೆದ ಚಂದನ್, ಪತ್ನಿ ನಿವೇದಿತಾಳ ಯೂಟ್ಯೂಬ್ ಚಾನಲ್ ನಲ್ಲಿಯೂ ಆಗಾಗ ಕಾಣಿಸಿಕೊಳ್ಳುತ್ತಿದ್ದರು. ಹೊರ ಪ್ರಪಂಚಕ್ಕೆ ಇಬ್ಬರೂ ಆತ್ಮೀಯವಾಗಿಯೇ ಇದ್ದರು. ಆದರೆ ಈಗ ಇಬ್ಬರೂ ದೂರಾಗಲಿದ್ದಾರೆ. ಡಿವೋರ್ಸ್ ಪಡೆಯಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಅಭಿಮಾನಿಗಳಿಗೆ ಆಘಾತ ತಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾರಾ ಜೋಡಿಯಾಗಿ ಗುರುತಿಸಿಕೊಂಡಿದ್ದ ಈ ಜೋಡಿ ಈಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಚ್ಂದನ್ ಶೆಟ್ಟಿಯಾಗಲಿ, ನಿವೇದಿತಾ ಆಗಲಿ ಈವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular