ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅರ್ಹತೆ

ತಿರುಪತಿ: ಆಂಧ್ರಪ್ರದೇಶದಲ್ಲಿ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಿದವರು ಮಾತ್ರ ಅರ್ಹತೆ ಪಡೆಯಲಿದ್ದಾರೆ.

ಆಂಧ್ರಪ್ರದೇಶದಲ್ಲಿ ಜನಸಂಖ್ಯೆ ಬೆಳವಣಿಗೆಗೆ ಹೊಸ ನಿಯಮ ರೂಪಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಮುಂದಾಗಿದೆ. ಕೌನ್ಸಿಲರ್, ಮೇಯರ್, ಸರಪಂಚ್ ಆಗುವ ಬಯಕೆ ಇದ್ದವರು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬೇಕು ಎಂಬ ಅರ್ಹತೆ ನಿಗದಿಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಜನನ ಪ್ರಮಾಣ ತಡೆ ಉದ್ದೇಶದಿಂದ ಸರ್ಕಾರ ಹೊಸ ನಿಯಮ ರೂಪಿಸಲಿದ್ದು, ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಹೊಸ ಕಾಯ್ದೆ ರೂಪಿಸಿ ಜಾರಿಗೆ ತರಲಾಗುತ್ತಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read