ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಾಂಬ ದೇವಿ ಜಾತ್ರೆ ನಡೆಯುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
ಈ ನಿಷೇಧಾಜ್ಞೆಯು ಶ್ರೀ ರೇಣುಕಾಂಬ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ.

