BREAKING NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸ್ವಾಮೀಜಿ ನೇರ ಮನವಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆಯೇ? ಸಿಎಂ ಬದಲಾವಣೆಯಾಗಲಿದ್ದಾರಾ? ಎಂಬ ಶಂಕೆ ಮೂಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ನಿಮ್ಮ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿರುವ ಘಟನೆಯೊಂದು ನಡೆದಿದೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ‘ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ’ ಎಂದು ಮನವಿ ಮಾಡಿದ್ದಾರೆ.

ನಿಮಗೆ ಅನುಭವವಿದೆ, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ವೇದಿಕೆ ಮೇಲೆಯೇ ಸ್ವಾಮೀಜಿಯೊಬ್ಬರ ಈ ಬೇಡಿಕೆ ಸರ್ಕಾರದಲ್ಲಿ ಸಂಚಲನ ಸೃಷ್ಟಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read