HomeKarnatakaBIG NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?

BIG NEWS: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಸಲಹೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ. ನಿಮಗೆ ಅನುಭವವಿದೆ, ಅವರಿಗೂ ಆ ಅವಕಾಶ ನೀಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ನೇರವಾಗಿ ಹೇಳಿದ್ದರು. ಸ್ವಾಮೀಜಿ ಹೇಳಿಕೆಗೆ ವೇದಿಕೆ ಮೇಲೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಎಲ್ಲವನ್ನೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.

ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ. ಎಲ್ಲವೂ ಹೈಕಮಾಂಡ್ ನವರೇ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಸ್ವಾಮೀಜಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಮೌನ ವಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular