ಮುಸ್ಲಿಮರ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗಲು ಸ್ವಾಮೀಜಿಗೆ ನೋಟಿಸ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕೆಂದು ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299ರ ಅಡಿ ಕೇಸ್ ದಾಖಲಾಗಿದೆ. ವಕ್ಫ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಂದ್ರಶೇಖರನಾಥ ಸ್ವಾಮೀಜಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು.

ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read