ಬೆಂಗಳೂರು : ಇಂದು ಐತಿಹಾಸಿಕ ಚಂದ್ರಯಾನ-3’ ಉಡಾವಣೆ ಯಶಸ್ವಿಯಾಗಿದ್ದು, ವಿಜ್ಞಾನಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತವು ಚಂದ್ರಯಾನ -3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಬಾಹ್ಯಾಕಾಶ ಪರಿಶೋಧನೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. ISRO ಸಾಧನೆಯನ್ನು ಸಾಧಿಸಲು ಅವಿರತವಾಗಿ ಶ್ರಮಿಸಿದ ತಂಡ ಮತ್ತು ಪ್ರತಿಯೊಬ್ಬರಿಗೆ ಹೃತ್ಪೂರ್ವಕ ಅಭಿನಂದನೆಗಳು . ಇದು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಗೆ ರಾಷ್ಟ್ರದ ಅಚಲ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಚಂದ್ರಯಾನದ ಯಶಸ್ಸಿಗೆ ನನ್ನ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ s. ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.
https://twitter.com/rashtrapatibhvn/status/1679789508487946240?ref_src=twsrc%5Etfw%7Ctwcamp%5Etweetembed%7Ctwterm%5E1679789508487946240%7Ctwgr%5E947119cc6456ac4299c7b3e6bd5154824e733dd5%7Ctwcon%5Es1_&ref_url=https%3A%2F%2Ftv9kannada.com%2Fnational%2Fchandrayaan-3-launch-live-updates-from-satish-dhawan-space-centre-in-sriharikota-in-andhra-pradesh-latest-news-vkb-622525.html