BIG NEWS : ಬಾಹ್ಯಾಕಾಶ ಕ್ಷೇತ್ರದಲ್ಲಿ ‘ಚಂದ್ರಯಾನ-3’ ಹೊಸ ಅಧ್ಯಾಯ ಬರೆದಿದೆ : ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಅಭಿನಂದನೆ

‘ಚಂದ್ರಯಾನ-3’ ಉಡಾವಣೆ ಯಶಸ್ವಿಯಾಗಿದ್ದು, ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಏರುತ್ತದೆ, ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ನಾನು ಅವರ ಉತ್ಸಾಹ ಮತ್ತು ಜಾಣ್ಮೆಗೆ ನಮಸ್ಕರಿಸುತ್ತೇನೆ! ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ ಒಳಗೊಂಡಿದೆ. ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.

https://twitter.com/narendramodi/status/1679789062561857537

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read