
ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಏರುತ್ತದೆ, ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ನಾನು ಅವರ ಉತ್ಸಾಹ ಮತ್ತು ಜಾಣ್ಮೆಗೆ ನಮಸ್ಕರಿಸುತ್ತೇನೆ! ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ ಒಳಗೊಂಡಿದೆ. ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿದೆ.
Chandrayaan-3 scripts a new chapter in India's space odyssey. It soars high, elevating the dreams and ambitions of every Indian. This momentous achievement is a testament to our scientists' relentless dedication. I salute their spirit and ingenuity! https://t.co/gko6fnOUaK
— Narendra Modi (@narendramodi) July 14, 2023

