ಹಾವೇರಿ: ಜಾತಿ ಸಮೀಕ್ಷೆ ಮುಗಿದ ನಂತರವೂ ಬದಲಾವಣೆ, ತಿದ್ದುಪಡಿಗೆ ಅವಕಾಶ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸೆ. 22 ರಿಂದ ಅ. 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ಮುಗಿದ ನಂತರವೂ ಬದಲಾವಣೆ ಅಥವಾ ತಿದ್ದುಪಡಿ ಇದ್ದರೆ ಅದಕ್ಕೆ ಅವಕಾಶವಿದೆ ಎಂದು ಹೇಳಿದ್ದಾರೆ.
ಎಲ್ಲರೂ ತಮ್ಮ ಜಾತಿಯನ್ನು ಸರಿಯಾಗಿ ನಮೂದಿಸುವಂತೆ ಕೋರಲಾಗಿದೆ. ಆಯಾ ಜಾತಿಯವರಿಗೆ ಮನವರಿಕೆ ಮಾಡಲಾಗುವುದು. ರಾಜ್ಯದಲ್ಲಿ 11 ವರ್ಷಗಳಿಂದ ಜಾತಿ ಸಮೀಕ್ಷೆಯಾಗಿಲ್ಲ. ಈ ವಿಚಾರದಲ್ಲಿ ನಮ್ಮದೂ ಲೋಪವಿದೆ. ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಹೊಸದಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.