HomeLive Newsಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು: ಏನೆಲ್ಲಾ ಬದಲಾವಣೆ, ಮಾರ್ಗಸೂಚಿ ಬಗ್ಗೆ ಇಲ್ಲಿದೆ...

ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು: ಏನೆಲ್ಲಾ ಬದಲಾವಣೆ, ಮಾರ್ಗಸೂಚಿ ಬಗ್ಗೆ ಇಲ್ಲಿದೆ ಮಾಹಿತಿ

ಹೊಸ ವರ್ಷಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನೈಸ್ ರಸ್ತೆಯಲ್ಲಿ ರಾತ್ರಿ 8ರಿಂದಲೇ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ರಾತ್ರಿ 10 ಗಂಟೆಯ ನಂತರ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣ ಬಂದ್‌ ಆಗಲಿದೆ. ಟ್ರಿನಿಟಿ ಅಥವಾ ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಪ್ರಯಾಣಿಕರು ಸಂಚಾರ ಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಹನ ನಿಲುಗಡೆ, ಸಂಚಾರ ನಿಷೇಧ ಮಾಹಿತಿ

ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್​​ನ ಬ್ರಿಗೇಡ್ ರಸ್ತೆ ಜಂಕ್ಷನ್​ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೊ ಹಾಲ್ ಜಂಕ್ಷನ್‌ವರೆಗೆ, ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಎಸ್‌ಬಿಐ ವೃತ್ತದವರೆಗೆ ಸಂಚಾರ ವ್ಯವಸ್ಥೆ ನಿಷೇಧಿಸಲಾಗಿದೆ.

ಬೆಂಗಳೂರಿನ ಶಿವಾಜಿನಗರ ಬಿಎಂಟಿಸಿ ಶಾಪಿಂಗ್‌ ಕಾಂಪ್ಲೆಕ್ಸ್ 1ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್, ಕಾಮರಾಜ್ ರಸ್ತೆಯಲ್ಲಿ (ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ) ಸಾರ್ವಜನಿಕರಿಗೆ ವಾಹನಗಳ ನಿಲುಗಡೆ ಅವಕಾಶ ಇದೆ.

ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರುಗಡೆಯ ಬಿಬಿಎಂಪಿ ಮೈದಾನ, ಬೆಥನಿ ಶಾಲಾ ಪಕ್ಕದ ಬಿಬಿಎಂಪಿ ಮೈದಾನ, 60 ಅಡಿ ಮಾದರಿ ರಸ್ತೆ ಎಡಭಾಗದಲ್ಲಿ (ಮುನಿರೆಡ್ಡಿ ಕಲ್ಯಾಣ ಮಂಟಪದಿಂದ ಕೆನರಾ ಬ್ಯಾಂಕ್‌ ಜಂಕ್ಷನ್‌ವರೆಗೆ) ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಲಾಗಿದೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ

ವರ್ಷಾಚರಣೆಯ ವೇಳೆ ಮಹಿಳೆಯರ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ಮತ್ತು ಟೆಂಪೊ ಟ್ರಾವೆಲ್‌ಗಳನ್ನು ಸೂಕ್ತ ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಮದ್ಯ ಕುಡಿದು ಸಾರ್ವಜನಿಕವಾಗಿ ಕಿರಿಕಿರಿ ಮಾಡುವುದು, ಗಲಾಟೆ ಅಥವಾ ಅಶಾಂತಿ ಸೃಷ್ಟಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಸೀಮಾಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ

ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

2025ರ ಡಿಸೆಂಬರ್‌ 31ರ ಮಧ್ಯಾಹ್ನ 2 ರಿಂದ 2026ರ ಜನವರಿ 1ರ ಬೆಳಗ್ಗೆ 10ರ ವರೆಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular