HomeKarnatakaBIG NEWS: ಶಾಲೆ - ಆಸ್ಪತ್ರೆ ಕಾಮಗಾರಿಗಳಿಗೂ 'ನರೇಗಾ' ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ

BIG NEWS: ಶಾಲೆ – ಆಸ್ಪತ್ರೆ ಕಾಮಗಾರಿಗಳಿಗೂ ‘ನರೇಗಾ’ ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಶಾಲೆ ಮತ್ತು ಆಸ್ಪತ್ರೆ ಕಾಮಗಾರಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ.

ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯ ತಿಳಿಸಿದ್ದು, ಇದರಿಂದಾಗಿ ಶಾಲೆ ಹಾಗೂ ಆಸ್ಪತ್ರೆ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಕೆಲ ದಿನಗಳಲ್ಲಿ ನಿಯಮಗಳಿಗೆ ಬದಲಾವಣೆ ತರಲಾಗುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಲಾಗಿದ್ದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ವಿಷಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular