HomeKarnatakaರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ ಗೆ ಓಮಿನಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ ಗೆ ಓಮಿನಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗರಗ ರಸ್ತೆಯ ಆಗರ ಬನ್ನಿಹಟ್ಟಿ ಕ್ರಾಸ್ ಬಳಿ ನಡೆದ ಅಒಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಓಮಿನಿ ವ್ಯಾನ್ ರಸ್ತೆ ಬದಿ ನಿಂತಿದ್ದ ಟ್ಯಾಕ್ಟರ್ ಟ್ರೈಲರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಾರಶೆಟ್ಟಿಹಳ್ಳಿ ಗ್ರಾಮದ ಸಿದ್ದಮ್ಮ(85), ಅವರ ಪುತ್ರ ರುದ್ರೇಶಪ್ಪ(64), ಮಲ್ಲಿಕಾರ್ಜುನಪ್ಪ(62) ಮೃತಪಟ್ಟವರು. ರತ್ನಮ್ಮ(54) ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ದಾವಣಗೆರೆಗೆ ಹೋಗಿ ವಾಪಸ್ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular