HomeKarnatakaBIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ

BIG NEWS: ಚನ್ನಗಿರಿ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ; ಲಾಕಪ್ ಡೆತ್ ಅಲ್ಲ; ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು ಲಾಕಪ್ ಡೆತ್ ಅಲ್ಲ, ಆರೋಪಿಗೆ ಪಿಟ್ಸ್ ಬಂದಿತ್ತು. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಪಿಟ್ಸ್ ನಿಂದಾಗಿ ಆರೋಪಿ ಸಾವನ್ನಪ್ಪಿದ್ದಾನೆ. ಆದರೂ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ಠಾಣೆ ಪೊಲೀಸರು ಶುಕ್ರವಾರ ಆದಿಲ್ ಎಂಬ ಆರೋಪಿಯನ್ನು ಠಾಣೆಗೆ ಕರೆತರುತ್ತಿದ್ದಂತೆ ಆತ ಕುಸಿದುಬಿದ್ದಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಮೃತಪಟ್ಟಿದ್ದ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಆದಿಲ್ ಸಂಬಂಧಿಕರು ಇದು ಲಾಕಪ್ ಡೆತ್ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ಕಲ್ಲುತೂರಾಟ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular