HomeKarnatakaBREAKING NEWS: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 23 ಆರೋಪಿಗಳು ಅರೆಸ್ಟ್

BREAKING NEWS: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 23 ಆರೋಪಿಗಳು ಅರೆಸ್ಟ್

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 23 ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆಗೆಂದು ಕರೆತಂದಿದ್ದ ಆದಿಲ್ ಎಂಬಾತ ಠಾಣೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಬೆನ್ನಲ್ಲೇ ಆದಿಲ್ ಸಂಬಂಧಿಕರು ಸೇರಿದಂತೆ ನೂರಾರು ಜನರು ಚನ್ನಗಿರಿ ಪೊಲೀಸ್ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದರು. ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದರು. ಈ ವೇಳೆ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳನ್ನು ಜಖಂಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯಲ್ಲಿ 11 ಪೊಲೀಸರು ಗಾಯಗೊಂಡಿದ್ದರು.

ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 40 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಲು ಸಿದ್ಧತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular