HomeKarnatakaBIG NEWS: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ...

BIG NEWS: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಲು ಮುಂದಾದ ಬಿಜೆಪಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದು, ಮೈತ್ರಿ ಅಭ್ಯರ್ಥಿಯನ್ನಾಗಿ ಯೋಗೇಶ್ವರ್ ಗೆ ಟಿಕೆಟ್ ಕೊಡಿಸಲು ಪ್ಲಾನ್ ಮಾಡಿವೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ನ್ನು ಸಿ.ಪಿ.ಯೋಗೇಶ್ವರ್ ಗೆ ಕೊಡಬೇಕು ಎಂದು ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ. ಈಗಾಗಲೇ ನಾನು ಹಾಗೂ, ಅಶ್ವತ್ಥನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿಯಾಗಿದ್ದೇವೆ. ಹೆಚ್.ಡಿ.ಕುಮಾರಸ್ವಾಮಿ ಜೊತೆಯೂ ಚರ್ಚೆ ನಡೆಸಿದ್ದೇವೆ. ಸಿ.ಪಿ.ಯೋಗೇಶ್ವರ್ ಗೆ ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳುವ ಬಗ್ಗೆ ಚರ್ಚೆಯಾಗಿದೆ ಎಂದರು.

ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಈ ನಿಟ್ಟಿನಲ್ಲಿ ದೆಹಲಿಗೆ ಹೋಗುತ್ತೇವೆ. ಯಾವಾಗ ದೆಹಲಿಗೆ ಹೋಗುತೇವೆ ಎಂಬ ಬಗ್ಗೆ ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular