BIG NEWS: ಚನ್ನಪಟ್ಟಣ ಗೆಲುವಿನ ಗುಟ್ಟು ಬಿಚ್ಚಿಟ್ಟ ಡಿಸಿಎಂ: ಬಿಜೆಪಿ-ಜೆಡಿಎಸ್ ನವರ ಸಹಾಯದಿಂದ ಯೋಗೇಶ್ವರ್ ಗೆಲುವು: ಡಿ.ಕೆ.ಶಿವಕುಮಾರ್ ಸ್ಫೊಟಕ ಹೇಳಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣೆ ಗೆಲುವಿನ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ವಿಪಕ್ಷಗಳೂ ಕಾರಣ ಎಂದಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಗೆಲುವಿಗೆ ಬಿಜೆಪಿ-ಜೆಡಿಎಸ್ ನಾಯಕರು, ಕಾರ್ಯಕರ್ತರು ಸಹಾಯ ಮಾಡಿದ್ದಾರೆ. ಅವರೆಲ್ಲರ ಪ್ರತ್ಯಕ್ಷ ಹಾಗೂ ಪರೋಕ್ಷ ಸಹಾಯದಿಂದಾಗಿ ನಮಗೆ ಗೆಲುವಾಗಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರು ನಮಗೆ ಸಹಾಯ ಮಾಡಿದ್ದಾರೆ. ಕಾಂಗ್ರೆಸ್ ಗೆ ಇದ್ದಿದ್ದೇ ಕೇವಲ 16,000 ವೋಟ್ ಆಗಿದೆ. ಜೆಡಿಎಸ್ ನ ಕೆಲ ನಾಯಕರೆಲ್ಲಾ ನಮಗೆ ಬೆಂಬಲವಾಗಿದ್ದರು. ಹಾಗಾಗಿ ಈ ಗೆಲುವು ಸಾಧ್ಯವಾಗಿದೆ. ಎಲ್ಲರಿಗೂ ಧನ್ಯವಾದಗಳು. ಎಲ್ಲರೂ ಒಗ್ಗಟ್ಟಾಗಿ ಸೇರಿ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read