BIG NEWS: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಬಯಸಿದ್ರಾ ನಟ ದರ್ಶನ್?

ರಾಮನಗರ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ನಟ ದರ್ಶನ್ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂಬ ಮಾತು ಕೇಳಿಬರುತ್ತಿದೆ.

ಚನ್ನಪಟ್ಟಣ ಉಪಚುನವಣೆಯಲ್ಲಿ ನಟ ದರ್ಶನ್ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಮುಂದಾಗಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸುಳಿವು ನೀಡಿದ್ದು, ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿ.ಕೆ.ಸಹೋದರರು ಸಿದ್ಧತೆ ನಡೆಸಿದ್ದರು ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆ ಅಚ್ಚರಿ ಅಭ್ಯರ್ಥಿ ಈಗ ಜೈಲು ಪಾಲಾಗಿದ್ದಾರೆ. ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಪ್ಲಾನ್ ಮಾಡಲಾಗಿತ್ತು. ಅವರನ್ನು ಚುನಾವಣೆಗೆ ನಿಲ್ಲಿಸಲು ಡಿ.ಕೆ.ಬ್ರದರ್ಸ್ ಸಿದ್ಧತೆ ನಡೆಸಿದ್ದರು. ಆದರೆ ಆ ವ್ಯಕ್ತಿ ಈಗ ಜೈಲು ಸೇರಿದ್ದಾರೆ. ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದು ಹೇಳುವ ಮೂಲಕ ನಟ ದರ್ಶನ್ ಅವರನ್ನು ಚನ್ನಪಟ್ಟಣ ಉಪಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ಪ್ಲಾನ್ ನಡೆದಿತ್ತು ಎಂಬ ಬಗ್ಗೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read