ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ನಾಳೆ ಚರ್ಚೆ

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಜೂನ್ 25ರಂದು ಮಂಗಳವಾರ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಅಥವಾ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಯಾವುದೇ ಪ್ರಾಥಮಿಕ ಚರ್ಚೆ ಕೂಡ ನಡೆದಿಲ್ಲ. ಎರಡು ಪಕ್ಷದವರು ಸೇರಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಿಂದ ಯಾರಾದರೂ ಸ್ಪರ್ಧೆ ಮಾಡಲಿ, ಯಾರು ಎಷ್ಟೇ ಬಲಾಢ್ಯರಾಗಿದ್ದರೂ ಜನ ಮನಸ್ಸು ಮಾಡಿದರೆ ಎಂತಹ ಫಲಿತಾಂಶ ಬರುತ್ತದೆ ಎನ್ನುವುದಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read