HomeKarnatakaBIG NEWS: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಿಂದ ಅಚ್ಚರಿ ಅಭ್ಯರ್ಥಿ: ಮಾಜಿ...

BIG NEWS: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಿಂದ ಅಚ್ಚರಿ ಅಭ್ಯರ್ಥಿ: ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧಿಸುವ ಸಾಧ್ಯತೆ ಇದೆ.

ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನೇಕ ಬಾರಿ ಚನ್ನಪಟ್ಟಣಕ್ಕೆ ಭೇಟಿ ನೀಡಿ ಕಾಂಗ್ರೆಸ್ ಗೆಲುವಿಗೆ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕೂಡ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ.

ಆದರೆ, ದಳಪತಿಗಳ ಲೆಕ್ಕಾಚಾರವೇ ಬೇರೆ ಇದೆ. ತಾವು ಗೆದ್ದಿದ್ದ ಈ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ಹೆಚ್.ಡಿ. ಕುಮಾರಸ್ವಾಮಿ ಅಳೆದು ತೂಗಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಗೆ ಭಾರಿ ಪೈಪೋಟಿ ಇದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ, ಮೈತ್ರಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಾಯಕರು ಕುಮಾರಸ್ವಾಮಿಯವರ ಮನವೊಲಿಸಿದ್ದಾರೆ. ಮಾಜಿ ಸಚಿವರಾದ ಸಾ.ರಾ. ಮಹೇಶ್ ಮತ್ತು ಬಂಡೆಪ್ಪ ಕಾಶೆಂಪೂರ ಸೇರಿದಂತೆ ಹಲವು ನಾಯಕರು ಪ್ರತಾಪ್ ಸಿಂಹ ಅವರನ್ನು ಜೆಡಿಎಸ್ ನಿಂದ ಕಣಕ್ಕಿಳಿಸಲು ಸಲಹೆ ನೀಡಿದ್ದು, ಇದಕ್ಕೆ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕ ಪ್ರತಾಪ್ ಸಿಂಹ ಒಪ್ಪಿಗೆ ಸೂಚಿಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular