HomeKarnatakaಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ...?

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ…?

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿಗಳು ಮಹಿಳೆಗೆ ಕಚ್ಚಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರ ಹೆಸರು ಸೇರಿಸದಿರಲು ಪೊಲೀಸರು ತೀರ್ಮಾನಿಸಿದ್ದಾರೆ.

ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಅವರ ಮನೆಯ ಸಾಕಿದ ನಾಯಿಗಳು ಕಚ್ಚಿದ್ದು, ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದರ್ಶನ್ ಕೂಡ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣ ನಡೆಯುವ ಸಂದರ್ಭದಲ್ಲಿ ತಾವು ಇರಲಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದನ್ನು ಗಮನಿಸಿ ಅವರ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular