HomeKarnatakaನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನಟ ನಾಗಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೋಲಿಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ 60 ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷ ದರ್ಶಿ ಹೇಳಿಕೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಪ್ರೇಮಾ ಮೃತಪಟ್ಟಿದ್ದರು. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಮೃತ ಪ್ರೇಮಾ ಪತಿ ಕೃಷ್ಣ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಈ ಹಿಂದೆ ನಟ ನಾಗಭೂಷಣ್ ಅವರ ಹೇಳಿಕೆಯನ್ನು ಪೊಲೀಸರು ಪಡೆದಿದ್ದರು. ಮೃತ ಪ್ರೇಮಾ ಫುಟ್ಪಾಪ್ ನಿಂದ ಕೆಳಗೆ ನಡೆದುಕೊಂಡು ಹೋಗುತ್ತಿದ್ದರು. ಅಲ್ಲದೆ ಏಕಾಏಕಿ ಕಾರ್ ಗೆ ಅಡ್ಡಲಾಗಿ ಬಂದ ಕಾರಣ ನಿಯಂತ್ರಣಕ್ಕೆ ಸಿಗಲಿ.ಲ್ಲ ಕಾರು ನಿಯಂತ್ರಣಕ್ಕೆ ಸಿಗದೇ ಅಪಘಾತವಾಗಿದೆ ಎಂದು ನಾಗಭೂಷಣ್ ಹೇಳಿದ್ದರು.

ಅಪಘಾತ ಸಂಬಂಧ ಕೃಷ್ಣ ನೀಡಿರುವ ಹೇಳಿಕೆಯಲ್ಲಿ ಎಲ್ಲವೂ ಉಲ್ಟಾ ಆಗಿದೆ. ಫುಟ್ಬಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ ಡಿಕ್ಕಿಯಾಗಿದೆ. ವೇಗವಾಗಿ ಬಂದ ಕಾರ್ ನನಗೆ ಮತ್ತು ನನ್ನ ಪತ್ನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಹಲವು ಆಯಾಮದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರ್ ನಲ್ಲಿ ಯಾವ ಲೋಪ ಆಗಿಲ್ಲ ಎಂದು ಆರ್.ಟಿ.ಓ. ಅಧಿಕಾರಿಗಳಿಂದ ವರದಿ ನೀಡಿದ್ದು, ಅಜಾಗರೂಕತೆ, ಅತಿ ವೇಗದಿಂದ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular